
ದಾಂಡೇಲಿ, 20 ಮಾರ್ಚ್ (ಹಿ.ಸ.):
ಆ್ಯಂಕರ್:
ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆರೋಗ್ಯ ಆಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಭಾಗವಹಿಸಿ ವಿವಿಧ ಆರೋಗ್ಯ ಸೇವೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಸೌಲಭ್ಯಗಳು, ರೋಗಿಗಳಿಗೆ ನೀಡಲಾಗುತ್ತಿರುವ ಸೇವೆಯ ಗುಣಮಟ್ಟ, ಔಷಧಿಗಳ ಲಭ್ಯತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಸಾರ್ವಜನಿಕರಿಗೆ ಇನ್ನಷ್ಟು ಪರಿಣಾಮಕಾರಿ ಮತ್ತು ತ್ವರಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ಅಗತ್ಯ ಸಲಹೆಗಳನ್ನು ನೀಡಿದರು. ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಬಿಸಿಸಿ ಅಧ್ಯಕ್ಷರು, ತಾಲೂಕು ವೈದ್ಯಾಧಿಕಾರಿಗಳು, ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa