ಮಹನಿಯರ ಜಯಂತಿ:ಮಾ.೨೪ರಂದು ಪೂರ್ವಭಾವಿ ಸಭೆ
ಧಾರವಾಡ, 20 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಹಾಗೂ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 119ನೇ ಜನ್ಮ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷ
ಮಹನಿಯರ ಜಯಂತಿ:ಮಾ.೨೪ರಂದು ಪೂರ್ವಭಾವಿ ಸಭೆ


ಧಾರವಾಡ, 20 ಮಾರ್ಚ್ (ಹಿ.ಸ.):

ಆ್ಯಂಕರ್:

ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆಯನ್ನು ಹಾಗೂ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 119ನೇ ಜನ್ಮ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಮಾರ್ಚ್ 24, 2026 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಭೆಗೆ ವಿವಿಧ ಸಂಘ ಸಂಸ್ಥೆಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande