ಸಾರಿಗೆ ಸಂಸ್ಥೆಯ ಬಸ್ ಹರಿದು ಮಹಿಳೆ ಸಾವು
ಗದಗ, 20 ಮಾರ್ಚ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮೃತರನ್ನು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದ ನಿವಾಸಿಯಾದ ಚೆನ್ನಮ್ಮ ಹಡಪದ (48) ಎಂದು ಗುರುತ
Death


ಗದಗ, 20 ಮಾರ್ಚ್ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.

ಮೃತರನ್ನು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದ ನಿವಾಸಿಯಾದ ಚೆನ್ನಮ್ಮ ಹಡಪದ (48) ಎಂದು ಗುರುತಿಸಲಾಗಿದೆ. ತಮ್ಮೂರಿಗೆ ತೆರಳಲು ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಸವಣೂರು ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ಏಕಾಏಕಿ ಮುಂದಕ್ಕೆ ಚಲಿಸುವಾಗ, ಚೆನ್ನಮ್ಮ ಅವರ ಕಾಲಿನ ಮೇಲೆ ಹರಿದಿದ್ದು, ಅವರು ಗಂಭೀರವಾಗಿ ಗಾಯಗೊಂಡರು. ತಕ್ಷಣವೇ ಸ್ಥಳೀಯರು ಅವರನ್ನು ಲಕ್ಷ್ಮೇಶ್ವರ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಗದಗದ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನೆಯ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande