
ಧಾರವಾಡ, 20 ಮಾರ್ಚ್ (ಹಿ.ಸ.):
ಆ್ಯಂಕರ್:
ಧಾರವಾಡ ಜಿಲ್ಲಾ ಪೊಲೀಸ ಇಲಾಖೆಯಿಂದ ಮಾರ್ಚ 23,2026 ರಂದು ಧಾರವಾಡ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸುಮುದಾಯದ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಗುತ್ತದೆ.
ಸಭೆಯು ಧಾರವಾಡ ಪೋಲೀಸ್ ಹೆಡ್ ಕ್ವಾರ್ಟರ್ಸ್ ದುರ್ಗಾದೇವಿ ದೇವಸ್ಥಾನದಲ್ಲಿ ಮಾರ್ಚ್ 23, ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.
ಜಿಲ್ಲೆಯ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳು ಸದರಿ ಕುಂದುಕೊರತೆ ಸಭೆಗೆ ಹಾಜರಾಗಬೇಕು ಎಂದು ಧಾರವಾಡ ಪೋಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa