
ವಿಜಯಪುರ, 21 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಆಲಮೇಲ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಪೊಲೀಸ್ ಠಾಣೆ ಕಟ್ಟಡದ ಕಾಮಗಾರಿಯನ್ನು ಶಾಸಕ ಅಶೋಕ ಮನಗೂಳಿ ಪರಿಶೀಲಿನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳದೆ ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸುವಂತೆ ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾರ್ವಜನಿಕರ ಸುರಕ್ಷತೆ ಮತ್ತು ಪೊಲೀಸ್ ಇಲಾಖೆಯ ಸುಗಮ ಕಾರ್ಯನಿರ್ವಹಣೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಆದ್ಯತೆಯ ಮೇಲೆ ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ಶಾಸಕರು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande