ಸ್ಥಾನಮಾನ ನೀಡುವಾಗ ಮಹಿಳೆಯರು ನೆನಪಾಗುವುದಿಲ್ಲ; ಸಭೆಗೆ ಮಾತ್ರ ನೆನಪಾಗ್ತಿವಾ? – ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರ ಆಕ್ರೋಶ
ಬಾಗಲಕೋಟೆ, 21 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ (ನವನಗರ) ಯಲ್ಲಿ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರ ಸಮ್ಮುಖದಲ್ಲಿ ನಡೆದ ಉಪಚುನಾವಣೆ ಸಂಬಂಧಿಸಿದ ಸಭೆಯಲ್ಲಿ ಕೆಲ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಆಕ್ರೋಶ ವ್ಯಕ್
ಮಹಿಳೆಯರು


ಬಾಗಲಕೋಟೆ, 21 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ (ನವನಗರ) ಯಲ್ಲಿ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರ ಸಮ್ಮುಖದಲ್ಲಿ ನಡೆದ ಉಪಚುನಾವಣೆ ಸಂಬಂಧಿಸಿದ ಸಭೆಯಲ್ಲಿ ಕೆಲ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಸಭೆಯ ವೇಳೆ ಮಾತನಾಡಿದ ಮಹಿಳಾ ಕಾರ್ಯಕರ್ತೆಯರು, ಪಕ್ಷದಲ್ಲಿ ಸ್ಥಾನಮಾನ ನೀಡುವಾಗ ಮಹಿಳೆಯರನ್ನು ಕಡೆಗಣಿಸಲಾಗುತ್ತಿದೆ. ಆದರೆ ಸಭೆ, ಕಾರ್ಯಕ್ರಮಗಳು ಮತ್ತು ಚುನಾವಣಾ ಕಾರ್ಯಗಳಲ್ಲಿ ಮಾತ್ರ ಮಹಿಳೆಯರನ್ನು ನೆನಪಿಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿರುವ ಮಹಿಳಾ ಕಾರ್ಯಕರ್ತೆಯರಿಗೆ ಸೂಕ್ತ ಮಾನ್ಯತೆ ಮತ್ತು ಜವಾಬ್ದಾರಿ ನೀಡಬೇಕು ಎಂದು ಅವರು ಒತ್ತಾಯಿಸಿದರು. ಈ ವೇಳೆ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಪಕ್ಷದ ಹಿರಿಯ ಮುಖಂಡರು ಮಧ್ಯಪ್ರವೇಶಿಸಿ ಮಹಿಳಾ ಕಾರ್ಯಕರ್ತೆಯರನ್ನು ಸಮಾಧಾನಪಡಿಸಿದರು.

ಮಹಿಳೆಯರ ಪಾತ್ರವನ್ನು ಪಕ್ಷದಲ್ಲಿ ಮತ್ತಷ್ಟು ಬಲಪಡಿಸುವ ಕುರಿತು ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹಲವಾರು ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande