
ಬಾಗಲಕೋಟೆ, 21 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಿ ವಾಹನಗಳ ಸಮಗ್ರ ತಪಾಸಣೆ ನಡೆಸುತ್ತಿದೆ.
ಚುನಾವಣೆಯನ್ನು ಸ್ವಚ್ಛ ಮತ್ತು ಸುಗಮವಾಗಿ ನಡೆಸುವ ಉದ್ದೇಶದಿಂದ ಪ್ರಮುಖ ರಸ್ತೆಗಳು ಹಾಗೂ ಪ್ರವೇಶ ದ್ವಾರಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ನಗದು, ಮದ್ಯ ಹಾಗೂ ಅನಧಿಕೃತ ವಸ್ತುಗಳ ಸಾಗಣೆ ಕುರಿತು ಪರಿಶೀಲನೆ ಕೈಗೊಳ್ಳಲಾಗುತ್ತಿದೆ.
ಈ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಹೊಂದಿರುವಂತೆ ಹಾಗೂ ವಾಹನಗಳ ತಪಾಸಣೆ ವೇಳೆ ಪೊಲೀಸರೊಂದಿಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande