ಉಪಚುನಾವಣೆ ಟಿಕೆಟ್ ಶೀಘ್ರ ಘೋಷಣೆ: ಎಂ.ಬಿ. ಪಾಟೀಲ್
ವಿಜಯಪುರ, 21 ಮಾರ್ಚ್ (ಹಿ.ಸ.) ಆ್ಯಂಕರ್ : ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಇನ್ನೆರಡು ದಿನಗಳೊಳಗೆ ಘೋಷಿಸಲಾಗುವುದು ಎಂದು ಬೃಹತ್ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್
ಎಂ ಬಿಪ


ವಿಜಯಪುರ, 21 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಇನ್ನೆರಡು ದಿನಗಳೊಳಗೆ ಘೋಷಿಸಲಾಗುವುದು ಎಂದು ಬೃಹತ್ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಹಾಗೂ ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ ಎಂದು ಹೇಳಿದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಿ ಯಾರಿಗೂ ಅಸಮಾಧಾನ ಉಂಟಾಗದ ರೀತಿಯಲ್ಲಿ ಟಿಕೆಟ್ ಹಂಚಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.

ಅದೇ ರೀತಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸುವುದು ನಿಶ್ಚಿತ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande