ಆಲಿಕಲ್ಲು ಮಳೆ ಹಾನಿ: ಸಮಗ್ರ ಸಮೀಕ್ಷೆ ನಡೆಸಿ ವರದಿಗೆ ಸಚಿವ ಎಂ.ಬಿ. ಪಾಟೀಲ ಸೂಚನೆ
ವಿಜಯಪುರ, 21 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಯಿಂದ ಉಂಟಾಗಿರುವ ಬೆಳೆಹಾನಿ ಕುರಿತು ಸಮಗ್ರ ಸಮೀಕ್ಷೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ
ಎಂ ಬಿ ಪಾಟೀಲ್


ವಿಜಯಪುರ, 21 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಯಿಂದ ಉಂಟಾಗಿರುವ ಬೆಳೆಹಾನಿ ಕುರಿತು ಸಮಗ್ರ ಸಮೀಕ್ಷೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಇಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಭಾರೀ ಹಾನಿಯಾಗಿದೆ. ಇದರ ಪರಿಣಾಮವಾಗಿ ಜಿಲ್ಲೆಯ ಹಲವು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ತಕ್ಷಣ ಅಧಿಕಾರಿಗಳ ಸಭೆ ನಡೆಸಿ ಬೆಳೆಹಾನಿ ಕುರಿತು ಸಮೀಕ್ಷೆ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಸಮೀಕ್ಷೆ ವೇಳೆ ಬೆಳೆ ಹಾನಿಗೊಳಗಾದ ಯಾವುದೇ ರೈತರ ಹೆಸರು ತಪ್ಪದೇ ದಾಖಲೆಯಾಗುವಂತೆ ಮುನ್ನೆಚ್ಚರಿಕೆ ವಹಿಸಬೇಕು. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಶೀಘ್ರದಲ್ಲೇ ಸಮಗ್ರ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಇದೇ ವೇಳೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರಾಹುಲ್ ದೊಡ್ಡಿಮನಿ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಬೆಳೆ ಹಾನಿಯ ಕುರಿತು ವೈಜ್ಞಾನಿಕ ಹಾಗೂ ಸಮಗ್ರ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande