
ವಿಜಯಪುರ, 21 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ರಾಂಪುರ ಗ್ರಾಮದಲ್ಲಿ ಶ್ರೀ ಆರೂಡ ಸಂಗನಬಸವೇಶ್ವರ ಮಠದ ಸಮೀಪ ನಿರ್ಮಾಣವಾಗಲಿರುವ ₹25 ಲಕ್ಷ ವೆಚ್ಚದ ಸಮುದಾಯ ಭವನ ಕಾಮಗಾರಿಗೆ ಸಿಂದಗಿ ಶಾಸಕ ಅಶೋಕ ಮನಗೂಳಿ
ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಮುದಾಯ ಭವನ ಗ್ರಾಮಸ್ಥರಿಗೆ ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀಗಳು, ಅರ್ಬನ್ ಬ್ಯಾಂಕ್ ನಿರ್ದೇಶಕರು, ವಿವಿಧ ಇಲಾಖೆಗಳ ನಾಮ ನಿರ್ದೇಶಿತ ಸದಸ್ಯರು, ಪಕ್ಷದ ಮುಖಂಡರು, ಹಿರಿಯ ನಾಗರಿಕರು, ಯುವ ನಾಯಕರು, ಮಠದ ಭಕ್ತರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande