ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದ ಸಿಂದಗಿ ಪೊಲೀಸರು
ವಿಜಯಪುರ, 21 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರ ಬಾಲಕರ ವಸತಿ ನಿಲಯಕ್ಕೆ ಇಂದು ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಪೊಲೀಸರು
ಹಾಸ್ಟೆಲ್


ವಿಜಯಪುರ, 21 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಮ್ಯಾಟ್ರಿಕ್ ನಂತರ ಬಾಲಕರ ವಸತಿ ನಿಲಯಕ್ಕೆ ಇಂದು ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಪೊಲೀಸರು ವಸತಿ ನಿಲಯದ ಅಡುಗೆ ಕೋಣೆ, ಲೈಬ್ರರಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ವಸತಿ ನಿಲಯದ ವಾರ್ಡನ್ ಅವರಿಗೆ ಸ್ವಚ್ಛತೆ ಕಾಪಾಡುವ ಬಗ್ಗೆ ಹಾಗೂ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಸೂಚನೆಗಳನ್ನು ನೀಡಿದರು.

ವಿದ್ಯಾರ್ಥಿಗಳಿಗೆ ಕಾನೂನು ಪಾಲನೆಯ ಮಹತ್ವ, ಶಿಸ್ತು ಮತ್ತು ಸುರಕ್ಷತೆ ಕುರಿತು ಜಾಗೃತಿ ಮೂಡಿಸಿ, ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಲು ಮಾರ್ಗದರ್ಶನ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande