
ಬಾಗಲಕೋಟೆ, 21 ಮಾರ್ಚ್ (ಹಿ.ಸ.)
ಆ್ಯಂಕರ್ : ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಜೀವ ರಕ್ಷಣೆಗಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬಾಗಲಕೋಟೆ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಸುರಕ್ಷಿತ ಚಾಲನೆ ನಿಮ್ಮ ಜೀವವನ್ನು ಮಾತ್ರವಲ್ಲ, ಇತರರ ಜೀವವನ್ನೂ ರಕ್ಷಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನ ಚಾಲನೆ ಮಾಡುವಾಗ ವೇಗ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಸೀಟ್ಬೆಲ್ಟ್ ಧರಿಸುವುದು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಿರುವುದು, ವಾಹನ ಚಾಲನೆಯ ವೇಳೆ ಮೊಬೈಲ್ ಬಳಸದೆ ಇರುವುದು ಸೇರಿದಂತೆ ಮೂಲಭೂತ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.
ಇದರ ಜೊತೆಗೆ ವಾಹನ ಚಾಲನೆ ಮಾಡುವಾಗ ಸೂಚಕಗಳನ್ನು (ಇಂಡಿಕೇಟರ್) ಸರಿಯಾಗಿ ಬಳಸುವುದು ಹಾಗೂ ವಾಹನಗಳ ನಡುವೆ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಅತ್ಯಂತ ಅಗತ್ಯವೆಂದು ತಿಳಿಸಿದ್ದಾರೆ.
ಜವಾಬ್ದಾರಿಯುತ ಚಾಲನೆ ಹಲವಾರು ಜೀವಗಳನ್ನು ಉಳಿಸಬಲ್ಲದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ತಕ್ಷಣವೇ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande