
ಹಾವೇರಿ, 22 ಮಾರ್ಚ್ (ಹಿ.ಸ.):
ಆ್ಯಂಕರ್:
ದಾವಣಗೆರೆ-ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಾವು ಬಹಳ ಲೆಕ್ಕಾಚಾರ ಹಾಕಿ ದಾವಣಗೆರೆಯಲ್ಲಿ ಟಿಕೆಟ್ ನೀಡಿದ್ದೇವೆ. ಬರುವಂತಹ ದಿನಗಳಲ್ಲಿ ಬಡವರು, ಎಸ್ಸಿ ಎಸ್ಟಿ ಜನರಿಂದ ದೊಡ್ಡ ಪ್ರಮಾಣದಲ್ಲಿ ಬೆಂಬಲ ಸಿಗುತ್ತದೆ. ಆಶ್ಚರ್ಯಕರ ಫಲಿತಾಂಶ ದಾವಣಗೆರೆಯಲ್ಲಿ ದೊರೆಯುತ್ತದೆ ಎಂದರು.
ಬಾಗಲಕೋಟೆಯಲ್ಲಿ ವಿಜಯ ಪಥದಲ್ಲಿ ನಾವು ಹೋಗುತ್ತಿದ್ದೇವೆ. ಕಳೆದ ಬಾರಿ ಕಾಂಗ್ರೆಸ್ ಸೇರಿದ್ದ ಅನೇಕ ಮುಖಂಡರು ಬಿಜೆಪಿಗೆ ಸೇರುತ್ತಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲಿ ದೊಡ್ಡ ಪ್ರಮಾಣದ ಅಂತರದಲ್ಲಿ ಗೆಲ್ಲುತ್ತೇವೆ. ದಾವಣಗೆರೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸುತ್ತೇವೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa