
ಬೆಂಗಳೂರು, 22 ಮಾರ್ಚ್ (ಹಿ.ಸ.):
ಆ್ಯಂಕರ್:ಉಪಚುನಾವಣೆ ಘೋಷಣೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಜೋರಾಗಿರುವ ಮಧ್ಯೆ ಕಾಂಗ್ರೆಸ್ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಪ್ರಕಟಿಸಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ ಶಾಮನೂರು ಅವರನ್ನು ಕಣಕ್ಕಿಳಿಸಲಾಗಿದ್ದು, ಅವರು ಹಿರಿಯ ಕಾಂಗ್ರೆಸ್ ನಾಯಕ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗರಾಗಿದ್ದಾರೆ. ಇತ್ತ ಬಾಗಲಕೋಟೆ ಕ್ಷೇತ್ರದಲ್ಲಿ ದಿವಂಗತ ಹೆಚ್.ವೈ.ಮೇಟಿ ಅವರ ಕಿರಿಯ ಪುತ್ರ ಉಮೇಶ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಕಾಂಗ್ರೆಸ್ ಒಳಗೆ ಸಾಕಷ್ಟು ಚರ್ಚೆ ಮತ್ತು ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಬಾರಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು ಎಂದು ಮುಸ್ಲಿಂ ಸಮುದಾಯದ ನಾಯಕರು ಬಲವಾದ ಒತ್ತಾಯ ಮಾಡಿದ್ದರು. ಮತ್ತೊಂದೆಡೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಶಾಮನೂರು ಟಿಕೆಟ್ ಘೋಷಣೆಗೆ ಮುನ್ನವೇ ನಾಮಪತ್ರ ಸಲ್ಲಿಸಿದ್ದರಿಂದ ಗೊಂದಲ ಮತ್ತಷ್ಟು ತೀವ್ರಗೊಂಡಿತ್ತು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa