ಅತಿ ದೀರ್ಘ ಅವಧಿಯ ಆಡಳಿತಗಾರರ ದಾಖಲೆ: ಪ್ರಧಾನಿ ಮೋದಿ ಹೊಸ ಮೈಲುಗಲ್ಲು
ನವದೆಹಲಿ, 22 ಮಾರ್ಚ್ (ಹಿ.ಸ.): ಆ್ಯಂಕರ್:ದೇಶದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅತಿ ಹೆಚ್ಚು ಅವಧಿ ಆಡಳಿತ ನಡೆಸಿದ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಈ ಹಿಂದೆ ಈ ದಾಖಲೆ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಹೆಸರಿನಲ್
Pm


ನವದೆಹಲಿ, 22 ಮಾರ್ಚ್ (ಹಿ.ಸ.):

ಆ್ಯಂಕರ್:ದೇಶದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅತಿ ಹೆಚ್ಚು ಅವಧಿ ಆಡಳಿತ ನಡೆಸಿದ ಸರ್ಕಾರದ ಮುಖ್ಯಸ್ಥರಾಗಿದ್ದಾರೆ.

ಈ ಹಿಂದೆ ಈ ದಾಖಲೆ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಹೆಸರಿನಲ್ಲಿ ಇತ್ತು. ಅವರು ಸುಮಾರು 8,930 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ, ಮುಖ್ಯಮಂತ್ರಿ ಹಾಗೂ ಪ್ರಧಾನಿಯಾಗಿ ಒಟ್ಟು 8,931 ದಿನಗಳ ಆಡಳಿತ ಪೂರೈಸುವ ಮೂಲಕ ಮೋದಿ ಅವರು ಈ ದಾಖಲೆಯನ್ನು ಮೀರಿದ್ದಾರೆ.

ಈ ಕುರಿತು ಅಮಿತ್ ಮಾಳವಿಯಾ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಾಧನೆ ದಶಕಗಳ ಕಾಲದ ಸ್ಥಿರ ನಾಯಕತ್ವ ಮತ್ತು ಸಾರ್ವಜನಿಕ ಸೇವೆಯ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದ್ದಾರೆ.

ಮೋದಿ ಅವರ ಹೆಸರಿನಲ್ಲಿ ಹಲವು ವಿಶಿಷ್ಟ ದಾಖಲೆಗಳಿವೆ. ಅವರು ಗುಜರಾತ್ ರಾಜ್ಯದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿದ್ದು, ಮುಖ್ಯಮಂತ್ರಿಯಾಗಿ ದೀರ್ಘ ಅನುಭವ ಹೊಂದಿರುವ ಪ್ರಧಾನಿಯೂ ಆಗಿದ್ದಾರೆ.

ಇದಲ್ಲದೆ, ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮೋದಿ ಅವರು, 2014, 2019 ಮತ್ತು 2024ರಲ್ಲಿ ಸತತ ಮೂರು ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಒಟ್ಟಿನಲ್ಲಿ, ಪ್ರಧಾನಿ ಮೋದಿ ಅವರ ಈ ಹೊಸ ಮೈಲುಗಲ್ಲು ದೇಶದ ರಾಜಕೀಯ ಇತಿಹಾಸದಲ್ಲಿ ಗಮನಾರ್ಹ ಅಧ್ಯಾಯವನ್ನೇ ಸೃಷ್ಟಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande