
ಬಾಗಲಕೋಟೆ, 22 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯ ಪವಿತ್ರ ಕ್ಷೇತ್ರವಾದ ಶ್ರೀ ಚನ್ನಬಸವೇಶ್ವರ ಹಿರೇಮಠಕ್ಕೆ ಸಂಸದ ಗೋವಿಂದ ಕಾರಜೋಳ್ ಭೇಟಿ ನೀಡಿ ಪರಮಪೂಜ್ಯ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪೂಜ್ಯ ಶ್ರೀಗಳ ಆಶೀರ್ವಾದವನ್ನು ಪಡೆದು ಸಮಾಜದಲ್ಲಿ ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಲಾಯಿತು. ಸದಾ ಜನಸೇವೆಯ ಹಾದಿಯಲ್ಲಿ ಸಾಗುತ್ತಿರುವ ಎಲ್ಲರಿಗೂ ಪೂಜ್ಯ ಶ್ರೀಗಳ ಮಾರ್ಗದರ್ಶನ ಮತ್ತು ಆಶೀರ್ವಾದಗಳು ಹೊಸ ಚೈತನ್ಯ ನೀಡುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಈ ವೇಳೆ ಹಿರೇಮಠದ ಭಕ್ತರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande