ಜಲವೇ ಜೀವ: ಸಂರಕ್ಷಣೆ ನಮ್ಮ ಜವಾಬ್ದಾರಿ;ಡಿ.ಕೆ.ಶಿವಕುಮಾರ್
ಬೆಂಗಳೂರು, 22 ಮಾರ್ಚ್ (ಹಿ.ಸ.): ಆ್ಯಂಕರ್: ಜೀವಸಂಕುಲದ ಅಸ್ತಿತ್ವಕ್ಕೆ ನೀರು ಅತ್ಯಮೂಲ್ಯ ಸಂಪತ್ತಾಗಿದ್ದು, ಕುಸಿಯುತ್ತಿರುವ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ನಾವೆಲ್ಲರೂ ಜಲಮೂಲಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಜಾಗತಿಕ ತಾಪಮಾನ ಏರಿಕೆ ಹಾ
Dks


ಬೆಂಗಳೂರು, 22 ಮಾರ್ಚ್ (ಹಿ.ಸ.):

ಆ್ಯಂಕರ್:

ಜೀವಸಂಕುಲದ ಅಸ್ತಿತ್ವಕ್ಕೆ ನೀರು ಅತ್ಯಮೂಲ್ಯ ಸಂಪತ್ತಾಗಿದ್ದು, ಕುಸಿಯುತ್ತಿರುವ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ನಾವೆಲ್ಲರೂ ಜಲಮೂಲಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯಂತಹ ಸವಾಲಿನ ಸಂದರ್ಭದಲ್ಲಿನ ಶುದ್ಧ ನೀರಿನ ಮಿತ ಬಳಕೆ ನಮ್ಮ ಸುಸ್ಥಿರ ಭವಿಷ್ಯಕ್ಕೆ ಅನಿವಾರ್ಯವಾಗಿದೆ. ಪ್ರತಿಯೊಂದು ನೀರಿನ ಹನಿಯೂ ಅಮೂಲ್ಯವೆಂಬ ಅರಿವು ನಮ್ಮಲ್ಲಿರಬೇಕು ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ, ವಿಶ್ವ ಜಲ ದಿನದ ಅಂಗವಾಗಿ ಮುಂದಿನ ಪೀಳಿಗೆಗಾಗಿ ನೀರನ್ನು ಉಳಿಸುವ ಸಂಕಲ್ಪವನ್ನು ಮಾಡೋಣ ಎಂದು ಅವರು ಕರೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande