
ವಿಜಯಪುರ, 22 ಮಾರ್ಚ್ (ಹಿ.ಸ.)
ಆ್ಯಂಕರ್ : ಇಂದು ವಿಶ್ವ ಜಲ ದಿನದ ಅಂಗವಾಗಿ ನೀರು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಸಾಕಷ್ಟು ಪ್ರಮಾಣದಲ್ಲಿ ನಡೆಯಬೇಕು ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
ನಮ್ಮ ಪೂರ್ವಜರು ನಿರ್ಮಿಸಿ ಉಳಿಸಿಕೊಂಡ ಅಮೂಲ್ಯ ಕೆರೆ-ಕಟ್ಟೆಗಳು, ಕಲ್ಯಾಣಿ ಹಾಗೂ ಬಾವಿಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಗಾರಿಕೆ. ಇಂದಿನ ಹನಿ ಉಳಿತಾಯವೇ ನಾಳೆಯ ಬದುಕಿನ ಭರವಸೆ ಎಂದು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿದ್ದಾರೆ.
ನೀರನ್ನು ಮಿತವಾಗಿ ಬಳಸುವುದು, ಮರುಬಳಕೆಗೆ ಆದ್ಯತೆ ನೀಡುವುದು ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಕಾರ್ಯಗಳಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿರುವ ಅವರು, ಮುಂದಿನ ಪೀಳಿಗೆಗೆ ನಾವು ನೀಡಬಹುದಾದ ಅತ್ಯುತ್ತಮ ಉಡುಗೊರೆ ಹಣ ಅಥವಾ ಆಸ್ತಿ ಅಲ್ಲ, ಶುದ್ಧ ಕುಡಿಯುವ ನೀರು ಎಂಬುದು ಈ ದಿನದ ಉದ್ದೇಶವಾಗಿದೆ.
ಈ ಹಿನ್ನೆಲೆಯಲ್ಲಿ ವಿಶ್ವ ಜಲ ದಿನದಂದು ನೀರನ್ನು ವ್ಯರ್ಥ ಮಾಡದೆ, ಸಂರಕ್ಷಿಸುವ ಸಂಕಲ್ಪವನ್ನು ಕೈಗೊಳ್ಳೋಣ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande