ಅಧಿವಕ್ತ ಪರಿಷತ್ ನಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಕೊಪ್ಪಳ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಮಹಿಳೆಯರ ರಕ್ಷಣೆಗೆ ಹಲವು ಕಾನೂನುಗಳಿದ್ದು ಅವುಗಳ ಕುಇರತು ಮಹಿಳೆಯರು ಜ್ಞಾನ ಪಡೆಯಬೇಕು ಎಂದು ವಕೀಲರ ಸಂಘಟನೆಯಾಗಿರುವ ಅಧಿವಕ್ತ ಪರಿಷತ್ತಿನ ಕರ್ನಾಟಕ ಉತ್ತರ ಭಾಗದ ರಾಜ್ಯಾಧ್ಯಕ್ಷರಾದ ಹಿರಿಯ ನ್ಯಾಯವಾದಿ ಸಿ.ಎಫ್. ಕುದರಿಮೋತಿ ಅವರು ತಿಳಿಸಿದ್ದಾರೆ. ಅಧಿ
ಅಂತಾರಾಷ್ಟ್ರೀಯ


ಕೊಪ್ಪಳ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಮಹಿಳೆಯರ ರಕ್ಷಣೆಗೆ ಹಲವು ಕಾನೂನುಗಳಿದ್ದು ಅವುಗಳ ಕುಇರತು ಮಹಿಳೆಯರು ಜ್ಞಾನ ಪಡೆಯಬೇಕು ಎಂದು ವಕೀಲರ ಸಂಘಟನೆಯಾಗಿರುವ ಅಧಿವಕ್ತ ಪರಿಷತ್ತಿನ ಕರ್ನಾಟಕ ಉತ್ತರ ಭಾಗದ ರಾಜ್ಯಾಧ್ಯಕ್ಷರಾದ ಹಿರಿಯ ನ್ಯಾಯವಾದಿ ಸಿ.ಎಫ್. ಕುದರಿಮೋತಿ ಅವರು ತಿಳಿಸಿದ್ದಾರೆ.

ಅಧಿವಕ್ತ ಪರಿಷತ್ ಕೊಪ್ಪಳ ಜಿಲ್ಲಾ ಘಟಕದಿಂದ ಶ್ರೀ ಚೈತನ್ಯ ಗ್ರೂಪ್ ಆಫ್ ಕಾಲೇಜ್, ಲಯನ್ಸ್ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜುನಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಹಿಳಾ ಬೋಧಕ ಸಿಬ್ಬಂದಿಯೊಂದಿಗೆ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲಿ ಪಾದಾರ್ಪಣೆ ಮಾಡುತ್ತಿದ್ದಾರೆ. ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟಲು ಸರಕಾರ ಮತ್ತು ನ್ಯಾಯಾಂಗ ಇಲಾಖೆ ವಿಶೇಷ ಕಾಯ್ದೆಗಳನ್ನು ಜಾರಿಗೊಳಿಸಿದೆ ಎಂದು ಮಹಿಳಾ ಕಾನೂನಿನ ಕುರಿತು ಮಾಹಿತಿ ನೀಡಿದರು.

ಅಧಿವಕ್ತ ಪರಿಷತ್ತಿನ ಕೊಪ್ಪಳ ಜಿಲ್ಲಾಧ್ಯಕ್ಷ ನ್ಯಾಯವಾದಿ ಮಂಜುನಾಥ ಹೆಚ್.ಎಂ ಮಾತನಾಡಿ, ಮಹಿಳೆಯರಿಗೆ ನೀಡಲಾದ ಕಾನೂನಿನ ಹಕ್ಕುಗಳು ಮತ್ತು ರಕ್ಷಣೆಗಳ ಕುರಿತಾದ ಕಾಯ್ದೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರಲ್ಲದೇ ವಕೀಲರ ಸಂಘಟನೆಗಳಲ್ಲೊಂದಾಗಿರುವ ಅಧಿವಕ್ತ ಪರಿಷತ್ ರಾಜ್ಯಮಟ್ಟದ ಸಂಘಟನೆಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲೂ ಅಧಿವಕ್ತ ಪರಿಷತ್ನಿಂದ ನಡೆಸಿದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಶ್ರೀ ಚೈತನ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿವಕ್ತಾ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷ ಎಸ್.ಬಿ. ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಶರಣು ಸಾವರ್ಕರ್ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿನಿಯರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande