ಬಾಗಲಕೋಟೆ ಉಪಚುನಾವಣೆ : ಬಿಜೆಪಿ ಗೆಲುವಿಗೆ ಕಾರ್ಯಕರ್ತರ ಸಜ್ಜು – ವಿಜಯೇಂದ್ರ
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರು ಸಂಪೂರ್ಣ ಸಜ್ಜಾಗಿದ್ದು, ಪಕ್ಷದ ಗೆಲುವಿಗಾಗಿ ದೃಢ ಸಂಕಲ್ಪ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಂದು ಹಿರಿಯ ನಾಯಕರ ಸಮ್ಮುಖದಲ್ಲಿ ನಡೆದ ಸಭೆ
ಬಿಜೆಪಿ


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರು ಸಂಪೂರ್ಣ ಸಜ್ಜಾಗಿದ್ದು, ಪಕ್ಷದ ಗೆಲುವಿಗಾಗಿ ದೃಢ ಸಂಕಲ್ಪ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಇಂದು ಹಿರಿಯ ನಾಯಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಗಿದ್ದು, ಕಾರ್ಯಕರ್ತರ ಅಭೂತಪೂರ್ವ ಉತ್ಸಾಹದೊಂದಿಗೆ ವಿಜಯದ ಸಂಕಲ್ಪ ಮಾಡಲಾಯಿತು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ಮಡುಗಟ್ಟಿರುವ ಅಸಮಾಧಾನ, ಬಿಜೆಪಿ ನಡೆಸುತ್ತಿರುವ ಅಭಿವೃದ್ಧಿ ರಾಜಕಾರಣ ಹಾಗೂ ಸಂಘಟಿತ ಶಕ್ತಿಯೊಂದಿಗೆ ಈ ಬಾರಿ ಬಾಗಲಕೋಟೆ ಉಪಚುನಾವಣೆಯಲ್ಲಿ ಕಮಲ ಅರಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕ್ಷೇತ್ರದ ಕಾರ್ಯಕರ್ತರ ಏಕತೆ, ಅವರ ಹುಮ್ಮಸ್ಸು ಹಾಗೂ ಮತದಾರರ ಆಶೀರ್ವಾದವೇ ಪಕ್ಷದ ಗೆಲುವಿನ ಮೆಟ್ಟಿಲಾಗಲಿದೆ. ಬಾಗಲಕೋಟೆಯ ಉಪಚುನಾವಣೆಯ ಫಲಿತಾಂಶವು ರಾಜ್ಯದ ಭವಿಷ್ಯದ ರಾಜಕಾರಣಕ್ಕೆ ದಿಕ್ಸೂಚಿಯಾಗಲಿದೆ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಎಂ. ಕಾರಜೋಳ, ಸಂಸದ ಪಿ.ಸಿ. ಗದ್ದಿಗೌಡರ್, ರಾಜ್ಯಸಭಾ ಸಂಸದ ನಾರಾಯಣಸಾ ಭಾಂಡಗೆ, ಶಾಸಕ ಸಿದ್ದು ಸವದಿ, ಜಿಲ್ಲಾಧ್ಯಕ್ಷ ಶಾಂತನಗೌಡ ಪಾಟೀಲ, ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ, ಹಿರಿಯ ಮುಖಂಡ ಪಿ.ಎಚ್. ಪೂಜಾರಿ, ಮಾಜಿ ಸಚಿವ ಮುರಗೇಶ್ ನಿರಾಣಿ, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಸೇರಿದಂತೆ ಅನೇಕ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande