ಬಾಗಲಕೋಟೆ ಉಪಚುನಾವಣೆ: ಗೋವಿಂದ ಬಳ್ಳಾರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ
ಬಾಗಲಕೋಟೆ, 23 ಮಾರ್ಚ್ (ಹಿ.ಸ.): ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಮುಖಂಡ ಹಾಗೂ ನಗರಸಭೆಯ ಮಾಜಿ ಸದಸ್ಯ ಗೋವಿಂದ ಬಳ್ಳಾರಿ ಅವರು ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಟಿಕೆಟ್ ನಿರೀಕ್ಷೆಯಲ್ಲಿದ್ದ ಅವರು ಮಾ.19ರಂದು ಸಾಂಕ
ಬಳ್ಳಾರಿ


ಬಾಗಲಕೋಟೆ, 23 ಮಾರ್ಚ್ (ಹಿ.ಸ.):

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಮುಖಂಡ ಹಾಗೂ ನಗರಸಭೆಯ ಮಾಜಿ ಸದಸ್ಯ ಗೋವಿಂದ ಬಳ್ಳಾರಿ ಅವರು ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಟಿಕೆಟ್ ನಿರೀಕ್ಷೆಯಲ್ಲಿದ್ದ ಅವರು ಮಾ.19ರಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದರು.

ಆದರೆ ಪಕ್ಷದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮತ್ತೆ ನಾಮಪತ್ರ ಸಲ್ಲಿಸಿದ್ದಾರೆ.

ಬಾಗಲಕೋಟೆ ಉಪಚುನಾವಣೆಯಲ್ಲಿ ಈ ಬೆಳವಣಿಗೆ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದ್ದು, ಸ್ಥಳೀಯ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ದಾರಿ ಮಾಡಿಕೊಡಬಹುದೆಂಬ ಮಾತುಗಳು ಕೇಳಿ ಬರುತ್ತಿವೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande