ಉಪ ಚುನಾವಣೆ:ಬಿಜೆಪಿ ಗೆಲುವು ಖಚಿತ ;ಪ್ರಹ್ಲಾದ್ ಜೋಶಿ
ಬಾಗಲಕೋಟೆ, 23 ಮಾರ್ಚ್ (ಹಿ.ಸ.) ಆ್ಯಂಕರ್ : ದಾವಣಗೆರೆಯಲ್ಲಿ ಮೊಮ್ಮಗ ಹಾಗೂ ಬಾಗಲಕೋಟೆಯಲ್ಲಿ ಮಗ ಈ ಉಪ ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅ
ಜೊಶಿ


ಬಾಗಲಕೋಟೆ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ದಾವಣಗೆರೆಯಲ್ಲಿ ಮೊಮ್ಮಗ ಹಾಗೂ ಬಾಗಲಕೋಟೆಯಲ್ಲಿ ಮಗ ಈ ಉಪ ಚುನಾವಣೆಯಲ್ಲಿ ಸೋಲುವುದು ಖಚಿತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಶ್ವಾಸ ವ್ಯಕ್ತಪಡಿಸಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನ ಇದೆ ಎಂದು ಹೇಳಿದರು.

ಎಲ್ಲೆಲ್ಲಿ ಗಣಪತಿ ಮೆರವಣಿಗೆ ಹಾಗೂ ಶಿವಾಜಿ ಮೆರವಣಿಗೆ ನಡೆಯುತ್ತವೆಯೋ ಅಲ್ಲಿ ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಯಿಂದ ಮತಾಂಧ ಶಕ್ತಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವುದಾಗಿ ಆರೋಪಿಸಿದರು. ಇದಕ್ಕೆ ಬಿಜೆಪಿ ಪಕ್ಷ ಮತ್ತು ಜನತೆ ಈ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದ ಹಲವು ಇಲಾಖೆಗಳಲ್ಲಿಯೂ ಶುಲ್ಕಗಳನ್ನು ಹೆಚ್ಚಿಸುವ ಮೂಲಕ ಸರ್ಕಾರ ಜನರ ಮೇಲೆ ಆರ್ಥಿಕ ಭಾರವನ್ನು ಹಾಕಿದೆ ಎಂದು ಆರೋಪಿಸಿದ ಅವರು, ಜನನ-ಮರಣ ಪ್ರಮಾಣ ಪತ್ರ ನೀಡುವ ಇಲಾಖೆಯಿಂದ ಹಿಡಿದು ಅನೇಕ ಕಡೆಗಳಲ್ಲಿ ಬೆಲೆ ಏರಿಕೆ ಮಾಡಲಾಗಿದ್ದು ಜನರ ಜೇಬಿಗೆ ಕತ್ತರಿ ಹಾಕಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ ಹಾಗೂ ಬೆಲೆ ಏರಿಕೆಯಿಂದ ಜನರು ಬೇಸತ್ತಿದ್ದು, ಬಾಗಲಕೋಟೆ ಕ್ಷೇತ್ರದ ಇತಿಹಾಸ ನೋಡಿದರೆ ಹಿಂದಿನಿಂದಲೂ ಬಿಜೆಪಿ ಗೆಲುವು ಸಾಧಿಸುತ್ತ ಬಂದಿದೆ. ಈ ಬಾರಿ ಕೂಡ ಬಿಜೆಪಿ ಖಂಡಿತವಾಗಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ಸಚಿವ ಜೋಶಿ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande