ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ
ಕೊಪ್ಪಳ, 23 ಮಾರ್ಚ್ (ಹಿ.ಸ.) ಆ್ಯಂಕರ್ : ವಿಧಾನಪರಿಷತ್ತಿನ ಮಾಜಿ ಸದಸ್ಯ ಕರಿಯಣ್ಣ ಸಂಗಟಿ (61) ಅವರು ಸೋಮವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವು ತಿಂಗಳಿಂದ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಅಂತ್ಯಕ್ರಿಯೆಯು ಮಂಗಳವಾರ ಸ್ವ
ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ


ಕೊಪ್ಪಳ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಧಾನಪರಿಷತ್ತಿನ ಮಾಜಿ ಸದಸ್ಯ ಕರಿಯಣ್ಣ ಸಂಗಟಿ (61) ಅವರು ಸೋಮವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವು ತಿಂಗಳಿಂದ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಅಂತ್ಯಕ್ರಿಯೆಯು ಮಂಗಳವಾರ ಸ್ವಗ್ರಾಮ ಯಲಮಗೇರಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಮೂವರು ಪುತ್ರಿಯರು ಹಾಗೂ ಆಪ್ತರನ್ನು - ಬಂಧುವರ್ಗವನ್ನು ಅಗಲಿದ್ದಾರೆ.

ಕರಿಯಣ್ಣ ಸಂಗಟಿ ಅವರು ವಿದ್ಯಾರ್ಥಿ ಹಂತದಿಂದಲೇ ರಾಜಕೀಯದಲ್ಲಿ ಸಕ್ರಿಯರಾಗಿದ್ದು, 1998ರಲ್ಲಿ ಕೊಪ್ಪಳ ಪ್ರತ್ಯೇಕ ಜಿಲ್ಲೆಯಾಗಿ ರೂಪುಗೊಂಡಾಗ ಮೊದಲ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಎಸ್.ಎಂ. ಕೃಷ್ಣ ಅವರ ಆಪ್ತರಾಗಿದರು. 2000ರಲ್ಲಿ ವಿಧಾನಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದರು. ಬಳಿಕ 2008ರಲ್ಲಿ ಕೊಪ್ಪಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ, 2018ರಲ್ಲಿ ಗಂಗಾವತಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande