ಡಾ. ಲೋಹಿಯಾ ಜಯಂತಿ: ಪ್ರಧಾನಿಯಿಂದ ಗೌರವ ನಮನ
ನವದೆಹಲಿ, 23 ಮಾರ್ಚ್ (ಹಿ.ಸ.): ಆ್ಯಂಕರ್:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಖ್ಯಾತ ಸಮಾಜವಾದಿ ಚಿಂತಕ ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು. ಸೋಮವಾರ ಎಕ್ಸನಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, “ಡಾ. ರಾಮ್ ಮನೋಹರ್ ಲೋಹ
Pm


ನವದೆಹಲಿ, 23 ಮಾರ್ಚ್ (ಹಿ.ಸ.):

ಆ್ಯಂಕರ್:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಖ್ಯಾತ ಸಮಾಜವಾದಿ ಚಿಂತಕ ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.

ಸೋಮವಾರ ಎಕ್ಸನಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, “ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ವಸಾಹತುಶಾಹಿ ಆಳ್ವಿಕೆಯ ವಿರುದ್ಧ ನಡೆದ ಸಾಮೂಹಿಕ ಹೋರಾಟದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯಾನಂತರ ಭಾರತದ ಪ್ರಗತಿಗೆ ಬಹುಮುಖ ಕೊಡುಗೆ ನೀಡಿದ ವ್ಯಕ್ತಿತ್ವ ಅವರದ್ದಾಗಿತ್ತು” ಎಂದು ತಿಳಿಸಿದ್ದಾರೆ.

ಲೋಹಿಯಾ ಅವರು ಅತ್ಯುತ್ತಮ ಚಿಂತಕರಾಗಿದ್ದು, ಸಾಮಾಜಿಕ ನ್ಯಾಯದ ಬಲವಾದ ಧ್ವನಿಯಾಗಿದ್ದರು ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಡವರು ಮತ್ತು ಅಂಚಿನಲ್ಲಿರುವವರ ಸಬಲೀಕರಣದತ್ತ ಅವರ ಬದ್ಧತೆ ಪೀಳಿಗೆಗಳಿಗೆ ಸ್ಫೂರ್ತಿಯಾಗಿದ್ದು, ಲಿಂಗ ಸಮಾನತೆ ಮತ್ತು ಭಾಗವಹಿಸುವ ಆಡಳಿತದ ಕುರಿತು ಅವರ ಅಭಿಪ್ರಾಯಗಳು ವಿಶೇಷ ಮಹತ್ವ ಹೊಂದಿವೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande