ಶಿರಕನಹಳ್ಳಿಯಲ್ಲಿ ಅಡವಿ ಮಹಾರಾಜರ ಜಾತ್ರಾ ಮಹೋತ್ಸವ
ವಿಜಯಪುರ, 23 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶಿರಕನಹಳ್ಳಿ ಗ್ರಾಮದಲ್ಲಿ ಶ್ರೀ ಅಡವಿ ಮಹಾರಾಜರ ನೂತನ ಪಂಚಲೋಹದ ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀ ಅಡವಿ ಮಹಾರಾಜರ ಮತ್ತು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಧರ್ಮಸಭೆ ಭಕ್ತಿಭಾವದಿಂದ ನೆ
ಯಶವಂತರಾಯಗೌಡ


ವಿಜಯಪುರ, 23 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶಿರಕನಹಳ್ಳಿ ಗ್ರಾಮದಲ್ಲಿ ಶ್ರೀ ಅಡವಿ ಮಹಾರಾಜರ ನೂತನ ಪಂಚಲೋಹದ ಮೂರ್ತಿ ಪ್ರತಿಷ್ಠಾಪನೆ ಹಾಗೂ ಶ್ರೀ ಅಡವಿ ಮಹಾರಾಜರ ಮತ್ತು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ಧರ್ಮಸಭೆ ಭಕ್ತಿಭಾವದಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು, ಸಂತ ಮಹಾತ್ಮರ ತತ್ವಗಳು ಸಮಾಜಕ್ಕೆ ಸನ್ಮಾರ್ಗ ತೋರಿಸುತ್ತವೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪೂಜ್ಯ ಶ್ರೀಗಳು, ಸ್ಥಳೀಯ ಹಾಗೂ ರಾಜಕೀಯ ಮುಖಂಡರು, ಗ್ರಾಮದ ಹಿರಿಯರು, ಗ್ರಾಮಸ್ಥರು ಮತ್ತು ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಪೂಜೆಗಳು ನೆರವೇರಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande