
ಬಾಗಲಕೋಟೆ, 23 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಉಪಸ್ಥಿತಿಯಲ್ಲಿ ಬೃಹತ್ ರ್ಯಾಲಿ ಹಾಗೂ ಬಹಿರಂಗ ಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ಬಸವಣ್ಣನವರ ನಾಡಿನಲ್ಲಿ ನುಡಿದಂತೆ ನಡೆದುಕೊಂಡು ಮಾತು ಉಳಿಸಿಕೊಂಡಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಸಮಾಜದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುತ್ತಿದೆ ಎಂದರು.
ಇಡೀ ಸರ್ಕಾರ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಬೆಂಬಲದಲ್ಲಿದ್ದು, ಉಪಚುನಾವಣೆಯಲ್ಲಿ ಅವರನ್ನು ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಶಾಸಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande