
ಬಾಗಲಕೋಟೆ, 24 ಮಾರ್ಚ್ (ಹಿ.ಸ.)
ಆ್ಯಂಕರ್ : ಅಕ್ಕಪಡೆ ತಂಡದ ವತಿಯಿಂದ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಚಖಂಡಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ಹಾಗೂ ನವನಗರ ಬಸ್ ನಿಲ್ದಾಣದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ವೇಳೆ ಅಕ್ಕಪಡೆ ತಂಡದ ಸದಸ್ಯರು ತಮ್ಮ ಕಾರ್ಯ ವೈಖರಿಯ ಕುರಿತು ಮಾಹಿತಿ ನೀಡಿದರಲ್ಲದೆ, ತುರ್ತು ಸಹಾಯವಾಣಿ 112, ಮಕ್ಕಳ ಸಹಾಯವಾಣಿ 1098, ಮಹಿಳಾ ಸಹಾಯವಾಣಿ 181 ಹಾಗೂ ಸೈಬರ್ ಸಹಾಯವಾಣಿ 1930 ಬಗ್ಗೆ ವಿವರಿಸಿದರು.
ಅದರೊಂದಿಗೆ ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಮತ್ತು ಬಾಲಕಾರ್ಮಿಕ ಪದ್ಧತಿ ಕುರಿತು ಕಾನೂನು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರು ಜಾಗೃತರಾಗಿದ್ದು, ಸಮಸ್ಯೆಗಳು ಎದುರಾದಲ್ಲಿ ಸಹಾಯವಾಣಿ ಸಂಖ್ಯೆಗಳ ಮೂಲಕ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಅಕ್ಕಪಡೆ ತಂಡ ಮನವಿ ಮಾಡಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande