ಜನತಾ ಬಜಾರ್ ಅಧ್ಯಕ್ಷರಾಗಿ ಗಲಗಲಿ ಆಯ್ಕೆ-ಮಾಜಿ ಶಾಸಕ ಶುಭ ಹಾರೈಕೆ
ಬಾಗಲಕೋಟೆ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಜನತಾ ಬಜಾರ್ನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿ ಗಲಗಲಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಮುತ್ತಣ್ಣ ಮೈತ್ರಿ ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ತಮ್ಮ ಗೃಹ ಕಚೇರಿಯಲ್ಲಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಅವರನ್ನು ಸನ್
ಜನತಾ


ಬಾಗಲಕೋಟೆ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ಜನತಾ ಬಜಾರ್ನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿ ಗಲಗಲಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಮುತ್ತಣ್ಣ ಮೈತ್ರಿ ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ತಮ್ಮ ಗೃಹ ಕಚೇರಿಯಲ್ಲಿ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ನಿಮ್ಮ ಅವಧಿಯಲ್ಲಿ ಜನತಾ ಬಜಾರ್ ಸಂಸ್ಥೆ ಮತ್ತಷ್ಟು ಅಭಿವೃದ್ಧಿ ಹೊಂದಿ ಉನ್ನತ ಶಿಖರಕ್ಕೇರಲಿ ಎಂದು ಹಾರೈಸಿದರು. ಸಂಸ್ಥೆಯ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಕಾರ್ಯಗಳು ಇನ್ನಷ್ಟು ವಿಸ್ತರಿಸಲಿ ಎಂದು ಆಶಿಸಿದರು.

ಈ ವೇಳೆ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande