ಉಪ ಚುನಾವಣೆ ತಪಾಸಣಾ ಕೇಂದ್ರದಲ್ಲಿ ₹2.30 ಲಕ್ಷ ನಗದು ಜಪ್ತಿ
ಬಾಗಲಕೋಟೆ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಇಲಕಲ್ ತಾಲೂಕಿನ ಗುಗ್ಗಲಮರಿ ಚೆಕ್ಪೋಸ್ಟ್ನಲ್ಲಿ ಮಂಗಳವಾರ ವಾಹನ ತಪಾಸಣೆ ವೇಳೆ ₹2.30 ಲಕ್ಷ ನಗದು ಪತ್ತೆಯಾದ ಘಟನೆ ನಡೆದಿದೆ. ಎಸ್ಎಸ್ಟಿ ತಂಡದ ಅಧಿಕಾರಿ ಎಂ.ಎಚ್. ಕೊತವಾಲ
ಹಣ


ಬಾಗಲಕೋಟೆ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಇಲಕಲ್ ತಾಲೂಕಿನ ಗುಗ್ಗಲಮರಿ ಚೆಕ್ಪೋಸ್ಟ್ನಲ್ಲಿ ಮಂಗಳವಾರ ವಾಹನ ತಪಾಸಣೆ ವೇಳೆ ₹2.30 ಲಕ್ಷ ನಗದು ಪತ್ತೆಯಾದ ಘಟನೆ ನಡೆದಿದೆ.

ಎಸ್ಎಸ್ಟಿ ತಂಡದ ಅಧಿಕಾರಿ ಎಂ.ಎಚ್. ಕೊತವಾಲ ಅವರ ನೇತೃತ್ವದಲ್ಲಿ ನಡೆಸಿದ ತಪಾಸಣೆಯ ವೇಳೆ ಈ ಹಣವನ್ನು ಜಪ್ತಿ ಮಾಡಲಾಗಿದೆ.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪತ್ತೆಯಾದ ಹಣದ ಕುರಿತು ಅಗತ್ಯ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande