ಉಪಚುನಾವಣೆ ಹಿನ್ನೆಲೆ: ಬಾಗಲಕೋಟೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ವಾಹನ ತಪಾಸಣೆ
ಬಾಗಲಕೋಟೆ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಲ್ಲಿರುವುದರಿಂದ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯ ವಿವಿಧ ಪ್ರಮುಖ ಸ್ಥಳಗಳಲ್ಲಿ ಚೆಕ್ಪೋ
ಚೆಕ್


ಬಾಗಲಕೋಟೆ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಯಲ್ಲಿರುವುದರಿಂದ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲೆಯ ವಿವಿಧ ಪ್ರಮುಖ ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ವಾಹನಗಳ ಸಮಗ್ರ ತಪಾಸಣೆ ನಡೆಸಲಾಗುತ್ತಿದೆ. ಯಾವುದೇ ಅಕ್ರಮ ಹಣ ಸಾಗಣೆ ಅಥವಾ ನಿಯಮ ಉಲ್ಲಂಘನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದೆ.

ವಾಹನಗಳನ್ನು ನಿಲ್ಲಿಸಿ ದಾಖಲೆಗಳನ್ನು ಪರಿಶೀಲಿಸುವ ಕಾರ್ಯವನ್ನು ಪೊಲೀಸರು ನಿರಂತರವಾಗಿ ನಡೆಸುತ್ತಿದ್ದಾರೆ.

ಸಾರ್ವಜನಿಕರು ತಮ್ಮ ವಾಹನಗಳ ಸಂಬಂಧಿತ ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಹಾಗೂ ತಪಾಸಣೆ ವೇಳೆ ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಬಾಗಲಕೋಟೆ ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande