
ಬಾಗಲಕೋಟೆ, 24 ಮಾರ್ಚ್ (ಹಿ.ಸ.)
ಆ್ಯಂಕರ್ : ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಾಗಲಕೋಟೆ ನಗರದಲ್ಲಿನ ಪ್ರಮುಖ ರಸ್ತೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ಕಾಲ್ನಡಿಗೆ ಗಸ್ತು ನಡೆಸಿದರು.
ಈ ವೇಳೆ ಪೊಲೀಸರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಮನವಿ ಮಾಡಿದರು.
ಜೊತೆಗೆ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದರು.
ನಗರದಲ್ಲಿ ಶಾಂತಿ ಮತ್ತು ಸುರಕ್ಷತೆ ಕಾಪಾಡುವ ಉದ್ದೇಶದಿಂದ ಇಂತಹ ಗಸ್ತು ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande