ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಪತಿ ಅಮೇರಿಕ ಸಮ್ಮೇಳನಕ್ಕೆ
ವಿಜಯಪುರ, 24 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂದ್ರ ಇನಾಮದಾರ ಅವರು ಅಮೇರಿಕಾದಲ್ಲಿ ನಡೆಯಲಿರುವ ಅಮೇರಿಕನ್ ಅಕ್ಯಾಡೆಮಿ ಆಫ್ ಡರ್ಮೆಟಾಲಾಜಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಅಮೇರಿಕಾದ ಡೆನವರ್ ನಗರದಲ್ಲಿ ಮಾರ
ವಿವಿ


ವಿಜಯಪುರ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂದ್ರ ಇನಾಮದಾರ ಅವರು ಅಮೇರಿಕಾದಲ್ಲಿ ನಡೆಯಲಿರುವ ಅಮೇರಿಕನ್ ಅಕ್ಯಾಡೆಮಿ ಆಫ್ ಡರ್ಮೆಟಾಲಾಜಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಅಮೇರಿಕಾದ ಡೆನವರ್ ನಗರದಲ್ಲಿ ಮಾರ್ಚ್ 26ರಿಂದ 31ರವರೆಗೆ ಆರು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆಂದು ಬಿಎಲ್ ಡಿಇ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ವೇಳೆ ಮಾರ್ಚ್ 25ರಂದು ಚಿಕಾಗೋದಲ್ಲಿರುವ ಪ್ರತಿಷ್ಠಿತ ಇಲಿನಾಯಿಸ್ ವಿಶ್ವವಿದ್ಯಾಲಯದಲ್ಲಿ “ಚಿಕ್ಕ ಮಕ್ಕಳಲ್ಲಿ ಚರ್ಮ ರೋಗ” ವಿಷಯ ಕುರಿತು ಡಾ. ಇನಾಮದಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಇದಲ್ಲದೆ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಇಲಿನಾಯಿಸ್ ವಿಶ್ವವಿದ್ಯಾಲಯದ ಅಸೋಸಿಯೇಟ್ ಡೀನ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande