
ಬಾಗಲಕೋಟೆ, 24 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ನವನಗರದಲ್ಲಿ ಬೂತ್ ಲೆವೆಲ್ ಏಜೆಂಟ್ (ಬಿ.ಎಲ್.ಎ.)–2 ಸಭೆಯನ್ನು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ ಅವರು ನಡೆಸಿದರು.
ಸಭೆಯಲ್ಲಿ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪ್ರತಿ ಕಾರ್ಯಕರ್ತರೂ ಜಾಗೃತಿಯಿಂದ ಹಾಗೂ ಸಂಘಟಿತವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಪಕ್ಷಕ್ಕೆ ಭರ್ಜರಿ ಗೆಲುವು ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಸಾಧಿಸುವುದು ನಮ್ಮ ಗುರಿಯಷ್ಟೇ ಅಲ್ಲ, ಜನರ ನಡುವೆ ಪಕ್ಷದ ಬೆಂಬಲವನ್ನು ಇನ್ನಷ್ಟು ಬಲಪಡಿಸುವ ಅವಕಾಶವೂ ಆಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್ ಜಿ ನಂಜಯ್ಯನಮಠ, ಮಾಜಿ ಸಚಿವ ಅಜಯಕುಮಾರ್ ಸರ್ನಾಯಕ್, ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಮುಖಂಡರಾದ ಮಲ್ಲಿಕಾರ್ಜುನ ಚರಂತಿಮಠ, ಸಂತೋಷ ಹೊಕ್ರಾಣಿ, ರಮೇಶ್ ಬದ್ನೂರ, ರಾಜು ಮಣಿಕೇರಿ ಸೇರಿದಂತೆ ಹಲವಾರು ಜಿಲ್ಲಾ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / jyothi deshpande