ಬೀದರ್: ಬ್ರಿಮ್ಸ್ ವಸತಿ ನಿಲಯದಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್, 24 ಮಾರ್ಚ್ (ಹಿ.ಸ.): ಆ್ಯಂಕರ್: ಬೀದರ ನಗರದ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಎಂ.ಬಿ.ಬಿ.ಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚೌಹಾಣ್ (21) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ


ಬೀದರ್, 24 ಮಾರ್ಚ್ (ಹಿ.ಸ.):

ಆ್ಯಂಕರ್:

ಬೀದರ ನಗರದ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಎಂ.ಬಿ.ಬಿ.ಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅನಿಷ್ಕಾರ್ ಚೌಹಾಣ್ (21) ಎಂದು ಗುರುತಿಸಲಾಗಿದೆ. ಇವರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನಿವಾಸಿಯಾಗಿದ್ದು, ಬ್ರಿಮ್ಸ್ ಕಾಲೇಜಿನಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿದ್ದರು.

ಮಾಹಿತಿ ಪ್ರಕಾರ, ವಿದ್ಯಾರ್ಥಿ ತನ್ನ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ತಿಳಿದ ತಕ್ಷಣ ನ್ಯೂ ಟೌನ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಯ ಆತ್ಮಹತ್ಯೆಯಿಂದ ಕಾಲೇಜು ವಲಯದಲ್ಲಿ ಆಘಾತದ ವಾತಾವರಣ ನಿರ್ಮಾಣವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande