ವಿಶ್ವ ಕ್ಷಯರೋಗ ದಿನ: ಜಾಗೃತಿ ಮೂಡಿಸುವುದು ಅಗತ್ಯ-ಸಚಿವ ಶಿವಾನಂದ ಕರೆ
ವಿಜಯಪುರ, 24 ಮಾರ್ಚ್ (ಹಿ.ಸ.) ಆ್ಯಂಕರ್ : ಕ್ಷಯರೋಗವು ಕೇವಲ ವ್ಯಕ್ತಿಯ ಶ್ವಾಸಕೋಶದ ಮೇಲೆ ಮಾತ್ರವಲ್ಲ, ಇಡೀ ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಸುಸ್ಥಿರತೆಯ ಮೇಲೆಯೂ ಆಘಾತ ನೀಡುತ್ತದೆ. ನಾವು ಉಸಿರಾಡುವ ಗಾಳಿ ಶುದ್ಧವಾಗಿರಲಿ, ನಮ್ಮ ಶ್ವಾಸಕೋಶಗಳು ಸದೃಢವಾಗಿರಲಿ ಎಂಬುದು ಪ್ರತಿಯೊಬ್ಬರ ಆಶಯವಾಗಿರಬೇಕು.
ಕ್ಷಯರೋಗ


ವಿಜಯಪುರ, 24 ಮಾರ್ಚ್ (ಹಿ.ಸ.)

ಆ್ಯಂಕರ್ : ಕ್ಷಯರೋಗವು ಕೇವಲ ವ್ಯಕ್ತಿಯ ಶ್ವಾಸಕೋಶದ ಮೇಲೆ ಮಾತ್ರವಲ್ಲ, ಇಡೀ ಕುಟುಂಬದ ಆರ್ಥಿಕ ಹಾಗೂ ಸಾಮಾಜಿಕ ಸುಸ್ಥಿರತೆಯ ಮೇಲೆಯೂ ಆಘಾತ ನೀಡುತ್ತದೆ. ನಾವು ಉಸಿರಾಡುವ ಗಾಳಿ ಶುದ್ಧವಾಗಿರಲಿ, ನಮ್ಮ ಶ್ವಾಸಕೋಶಗಳು ಸದೃಢವಾಗಿರಲಿ ಎಂಬುದು ಪ್ರತಿಯೊಬ್ಬರ ಆಶಯವಾಗಿರಬೇಕು.

ವಿಶ್ವ ಕ್ಷಯರೋಗ ದಿನದ ಅಂಗವಾಗಿ, ರೋಗದ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ಪಡೆಯುವುದು ಅತ್ಯಂತ ಮುಖ್ಯವಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಚಿಕಿತ್ಸೆ ಆರಂಭಿಸಿದ ನಂತರ ಅದನ್ನು ಅರ್ಧಕ್ಕೆ ನಿಲ್ಲಿಸದೇ ಪೂರ್ಣಗೊಳಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಕ್ಷಯರೋಗ ನಿರ್ಮೂಲನೆಗಾಗಿ ಸರ್ಕಾರ ಹಾಗೂ ಆರೋಗ್ಯ ಇಲಾಖೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರು ಸಹ ಇದರ ಬಗ್ಗೆ ಎಚ್ಚರಿಕೆ ವಹಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು.

ಕ್ಷಯರೋಗ ಮುಕ್ತ ಸಮಾಜ ನಿರ್ಮಾಣವೇ ಬಲಿಷ್ಠ ರಾಷ್ಟ್ರದ ನಿರ್ಮಾಣಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande