ಬಾಗಲಕೋಟೆ ಉಪಚುನಾವಣೆ–2026: ಶೇಕಡಾ 100ರಷ್ಟು ಮತದಾನಕ್ಕೆ ಜಿಲ್ಲಾಡಳಿತದಿಂದ ಜಾಗೃತಿ ಕರೆ
ಬಾಗಲಕೋಟೆ, 25 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ–2026 ಹಿನ್ನೆಲೆಯಲ್ಲಿ ಶೇಕಡಾ 100ರಷ್ಟು ಮತದಾನವನ್ನು ಖಚಿತಪಡಿಸುವ ಉದ್ದೇಶದಿಂದ ಜಿಲ್ಲಾಡಳಿತವು ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಂಡಿದೆ. ಮತದಾನವು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತ
ಮತದಾನ


ಬಾಗಲಕೋಟೆ, 25 ಮಾರ್ಚ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ–2026 ಹಿನ್ನೆಲೆಯಲ್ಲಿ ಶೇಕಡಾ 100ರಷ್ಟು ಮತದಾನವನ್ನು ಖಚಿತಪಡಿಸುವ ಉದ್ದೇಶದಿಂದ ಜಿಲ್ಲಾಡಳಿತವು ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಂಡಿದೆ.

ಮತದಾನವು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಪ್ರತಿಯೊಬ್ಬ ಅರ್ಹ ಮತದಾರರೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಡಳಿತ ಕರೆ ನೀಡಿದೆ.

ಮತದಾನದ ಮಹತ್ವವನ್ನು ತಿಳಿಸುವ ವಿವಿಧ ಜಾಗೃತಿ ಕಾರ್ಯಕ್ರಮಗಳು, ಅಭಿಯಾನಗಳು ಹಾಗೂ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

ಮತದಾರರು ಮತದಾನ ದಿನದಂದು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಂಡು, ಅಗತ್ಯ ಗುರುತಿನ ಚೀಟಿಯೊಂದಿಗೆ ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತ ಚಲಾಯಿಸುವಂತೆ ಮನವಿ ಮಾಡಲಾಗಿದೆ.

ಪ್ರಜಾಪ್ರಭುತ್ವವನ್ನು ಬಲಪಡಿಸಲು ಎಲ್ಲರೂ ಪಾಲ್ಗೊಂಡು ಶೇಕಡಾ 100ರಷ್ಟು ಮತದಾನವನ್ನು ಸಾಧಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾಡಳಿತ ಮತದಾರರಲ್ಲಿ ಮನವಿ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande