ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಸುನೀಲ್ ಗೌಡ ಪಾಟೀಲ ಚಾಲನೆ
ವಿಜಯಪುರ, 25 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ–ಬಾಗಲಕೋಟೆ ಅವಳಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಗೌಡ ಪಾಟೀಲ ಅವರು ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದ ಸಿಸಿ ರಸ್ತೆ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಗ್ರಾಮಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕೈಗೆತ್ತಿ
Mcl


ವಿಜಯಪುರ, 25 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ–ಬಾಗಲಕೋಟೆ ಅವಳಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಗೌಡ ಪಾಟೀಲ ಅವರು ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದ ಸಿಸಿ ರಸ್ತೆ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಗ್ರಾಮಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ಈ ಕಾಮಗಾರಿಗೆ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಸರಳತೆ ಹಾಗೂ ಸೌಮ್ಯ ವ್ಯಕ್ತಿತ್ವದಿಂದ ಜನಮನ ಗೆದ್ದಿರುವ ಸುನೀಲ್ ಗೌಡ ಪಾಟೀಲ ಅವರು ಜನಸೇವೆಯೇ ಧರ್ಮ ಎಂಬ ಮನೋಭಾವದೊಂದಿಗೆ ನಿರಂತರವಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.

ಗ್ರಾಮದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ಇಂತಹ ಯೋಜನೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande