
ಬಾಗಲಕೋಟೆ, 25 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ದಿನದಿಂದ ದಿನಕ್ಕೆ ಚುರುಕುಗೊಂಡಿದೆ. ಈ ಹಿನ್ನೆಲೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಹಿರಿಯ ಮುಖಂಡ ಮಲ್ಲಿಕಾರ್ಜುನ ಚರಂತಿಮಠ ಅವರು ಭರ್ಜರಿ ಪ್ರಚಾರ ನಡೆಸಿದರು.
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಸಹೋದರನಾಗಿರುವ ಮಲ್ಲಿಕಾರ್ಜುನ ಚರಂತಿಮಠ ಕಾಂಗ್ರೆಸ್ ಅಭ್ಯರ್ಥಿ ಪರ ನಡೆಸುತ್ತಿರುವ ಪ್ರಚಾರದಿಂದ ಕ್ಷೇತ್ರದಲ್ಲಿ ಭಾರಿ ಪೈಪೋಟಿ ಏರ್ಪಟ್ಟಿದ್ದು ಸಹೋದರರ ಚುನಾವಣೆ ಬಗ್ಗೆ ಮತದಾರರಲ್ಲಿ ಭಾರಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ಇನ್ನು ಪ್ರಚಾರದ ವೇಳೆ ಮತದಾರರನ್ನು ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬೆಂಬಲ ನೀಡುವಂತೆ ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಚರಂತಿಮಠ, ಮಾಜಿ ಶಾಸಕ ಹೆಚ್.ವೈ. ಮೇಟಿ ಅವರು ಕ್ಷೇತ್ರದಲ್ಲಿ ಜನಪರ ಕೆಲಸಗಳನ್ನು ಮಾಡಿ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಗಳಿಸಿದ್ದರು ಎಂದು ಹೇಳಿದರು.
ಮೇಟಿ ಅವರ ಸೇವೆಯನ್ನು ಜನರು ಇನ್ನೂ ಸ್ಮರಿಸುತ್ತಿದ್ದಾರೆ. ಅವರ ಮಗ ಉಮೇಶ್ ಮೇಟಿ ಕೂಡ ತಂದೆಯ ಹಾದಿಯಲ್ಲೇ ನಡೆದು ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು.
ಕ್ಷೇತ್ರದ ಅಭಿವೃದ್ಧಿಯನ್ನು ಮುಂದುವರಿಸಲು ಉಮೇಶ್ ಮೇಟಿ ಅವರಿಗೆ ಮತ ನೀಡಿ ಗೆಲುವು ಸಾಧಿಸಲು ಸಹಕರಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande