
ನವದೆಹಲಿ, 25 ಮಾರ್ಚ್ (ಹಿ.ಸ.):
ಆ್ಯಂಕರ್:
ಎಲ್‌ಪಿಜಿ ಮರುಪೂರಣ ಬುಕಿಂಗ್ ಗಡುವು ಬದಲಾಯಿಸಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿನ ವರದಿಗಳನ್ನು ಕೇಂದ್ರ ಸರ್ಕಾರ ಖಂಡಿಸಿದ್ದು, ಅವು ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬುಧವಾರ ನೀಡಿದ ಪ್ರಕಟಣೆಯಲ್ಲಿ, ಮರುಪೂರಣ ಗಡುವಿನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ತಿಳಿಸಿದೆ. ಕೆಲ ವರದಿಗಳಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮತ್ತು ಇತರೆ ಸಂಪರ್ಕಗಳಿಗೆ ವಿಭಿನ್ನ ಹೊಸ ಗಡುವು ನಿಗದಿ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಇದು ತಪ್ಪು ಮಾಹಿತಿ ಎಂದು ಹೇಳಿದೆ.
ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಪ್ರಕಾರ, ಎಲ್‌ಪಿಜಿ ಮರುಪೂರಣ ಬುಕಿಂಗ್ ಗಡುವು ನಗರ ಪ್ರದೇಶಗಳಲ್ಲಿ 25 ದಿನಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳಾಗಿದ್ದು, ಇದು ಎಲ್ಲಾ ವರ್ಗದ ಸಂಪರ್ಕಗಳಿಗೆ ಸಮಾನವಾಗಿ ಅನ್ವಯಿಸುತ್ತದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಇದಲ್ಲದೆ, ದೇಶದಲ್ಲಿ ಎಲ್‌ಪಿಜಿ ಸರಬರಾಜು ಸಮರ್ಪಕವಾಗಿದ್ದು, ಯಾವುದೇ ಕೊರತೆ ಇಲ್ಲ ಎಂದು ಸರ್ಕಾರ ತಿಳಿಸಿದೆ. ಅನಗತ್ಯ ಭಯದಿಂದ ಮರುಪೂರಣವನ್ನು ಮುಂಗಡವಾಗಿ ಬುಕ್ ಮಾಡುವುದನ್ನು ತಪ್ಪಿಸಬೇಕು ಎಂದು ನಾಗರಿಕರಿಗೆ ಮನವಿ ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa