ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಎನ್.ಎನ್ ಶ್ರೀರಾಮ್ ಆಯ್ಕೆ
ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಎನ್.ಎನ್ ಶ್ರೀರಾಮ್ ಆಯ್ಕೆ
ಎನ್.ಎನ್.ಶ್ರೀರಾಮ್


ಕೋಲಾರ, ೨೫ ಮಾರ್ಚ್ (ಹಿ.ಸ):

ಆಂಕರ್ : ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ಸಂಘಟನೆಯ ನೂತನ ಜಿಲ್ಲಾ ಅಧ್ಯಕ್ಷರಾಗಿ ತಾಲೂಕಿನ ನುಕ್ಕನಹಳ್ಳಿ ಗ್ರಾಮದ ಎನ್.ಎನ್ ಶ್ರೀರಾಮ್ ಅವರನ್ನು ಆಯ್ಕೆ ಮಾಡಲಾಗಿದೆ.

ಸಂಘದ ಜಿಲ್ಲಾ ಅಧ್ಯಕ್ಷರಾಗಿದ್ದ ಟಿ.ಎಂ ವೆಂಕಟೇಶ್ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ತೆರವು ಆಗಿದ್ದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಗರದ ಪ್ರಾಂತ ರೈತ ಸಂಘದ ಕಛೇರಿಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಎನ್.ಎನ್ ಶ್ರೀರಾಮ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ,

ನುಕ್ಕನಹಳ್ಳಿ ಶ್ರೀರಾಮ್ ಅವರು ವಿಧ್ಯಾರ್ಥಿ ದೆಸೆಯಿಂದ ಹೋರಾಟಗಾರರಾಗಿ ಗುರುತಿಸಿಕೊಂಡು ಭಾರತ ವಿಧ್ಯಾರ್ಥಿ ಫೆಡರೇಶನ್ ಎಸ್ಎಫ್ಐಸಂಘಟನೆಯ ಜಿಲ್ಲಾ ಅಧ್ಯಕ್ಷರಾಗಿ, ನಂತರ ಡಿವೈಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿ ನಂತರ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಇವರನ್ನು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande