


ಬಾಗಲಕೋಟೆ, 26 ಮಾರ್ಚ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರ ನೇತೃತ್ವದಲ್ಲಿ ವಿವಿಧ ಸಮಿತಿಗಳ ಸಭೆ ನಡೆಯಿತು.
ಉಪಚುನಾವಣೆಯ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಸಿದ್ಧತೆ, ಪ್ರಚಾರ ತಂತ್ರಗಳು ಹಾಗೂ ವಿವಿಧ ಸಮಿತಿಗಳ ಕಾರ್ಯಯೋಜನೆಗಳ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಯಿತು. ಪಕ್ಷದ ಸಂಘಟನೆ ಬಲಪಡಿಸುವುದು ಹಾಗೂ ಮತದಾರರ ಸಂಪರ್ಕ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಮುಖಂಡರು ಸಲಹೆ-ಸೂಚನೆಗಳನ್ನು ನೀಡಿದರು.
ಸಭೆಯ ಬಳಿಕ ಸಚಿವ ತಿಮ್ಮಾಪೂರ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸ್ಥಾಪಿಸಲಾದ ಕಾಂಗ್ರೆಸ್ ವಾರ್ ರೂಂ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಗೋಪಿನಾಥ್ ಪಳನಿಯಪ್ಪ, ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ್, ಭಾರತ ರಾಷ್ಟ್ರೀಯ ಮಜೂರ್ ಕಾಂಗ್ರೆಸ್ ಬಾಗಲಕೋಟ ಜಿಲ್ಲಾ ಅಧ್ಯಕ್ಷ ತೌಫಿಕ್ ಪಾರ್ಥನಳ್ಳಿ ಸೇರಿದಂತೆ ಹಲವು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವಾರ್ ರೂಂ ಉದ್ಘಾಟನೆಯ ನಂತರ ಮಾತನಾಡಿದ ಸಚಿವ ತಿಮ್ಮಾಪೂರ, “ಉಪಚುನಾವಣೆಯಲ್ಲಿ ಪ್ರತಿಯೊಂದು ಬೂತ್ನಲ್ಲೂ ನಾವು ಬಲವಾಗಿ ನಿಲ್ಲಬೇಕು. ವಾರ್ ರೂಂ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಪಕ್ಷದ ಗೆಲುವಿಗೆ ದಾರಿ ಮಾಡಿಕೊಡಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande