
ನವದೆಹಲಿ, 26 ಮಾರ್ಚ್ (ಹಿ.ಸ.):
ಆ್ಯಂಕರ್:
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವನ್ನಪ್ಪಿದ ಪ್ರಕರಣವನ್ನು ಮಾನವ ಹಕ್ಕು ಆಯೋಗ ಸ್ವಯಂಪ್ರೇರಿತವಾಗಿ ಪರಿಗಣಿಸಿದೆ.
ಘಟನೆಗೆ ಗಂಭೀರ ಮಾನವ ಹಕ್ಕು ಉಲ್ಲಂಘನೆ ಎಂದಿರುವ ಆಯೋಗವು ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ, ಎರಡು ವಾರಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದೆ.
ಹಾಲಿನಲ್ಲಿ ವಿಷಕಾರಿ ಎಥಿಲೀನ್ ಗ್ಲೈಕಾಲ್ ಬೆರೆಸಿರುವ ಶಂಕೆ ವ್ಯಕ್ತವಾಗಿದ್ದು, ಇದರಿಂದ ಬಹು ಅಂಗಾಂಗ ವೈಫಲ್ಯ ಉಂಟಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ. ಕೆಲವು ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ನರಸಾಪುರಂ ಗ್ರಾಮದ ಡೈರಿಯಿಂದ ಪೂರೈಸಿದ ಹಾಲೇ ಮೂಲವಾಗಿರಬಹುದು ಎಂದು ಶಂಕಿಸಲಾಗಿದ್ದು, ವೃದ್ಧರು ಹಾಗೂ ಮಕ್ಕಳೇ ಹೆಚ್ಚು ಬಲಿಯಾಗಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa