ಮಹಿಳಾ ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ: ವಿದ್ಯಾರ್ಥಿನಿಯರಿಗೆ ಕಾನೂನು ಜಾಗೃತಿ
ವಿಜಯಪುರ, 26 ಮಾರ್ಚ್ (ಹಿ.ಸ.) ಆ್ಯಂಕರ್ : ಮಹಿಳಾ ಪೊಲೀಸ್ ಠಾಣೆಯ ವತಿಯಿಂದ ಗುರುವಾರ “ತೆರೆದ ಮನೆ” ಕಾರ್ಯಕ್ರಮವನ್ನು ಆಯೋಜಿಸಿ, ಬಿಡಿಇ ಸೊಸೈಟಿಯ ಕಾಲೇಜಿನ ವಿದ್ಯಾರ್ಥಿನಿಯರಿಗೆ ವಿವಿಧ ಕಾನೂನುಗಳ ಕುರಿತು ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಮಹಿಳಾ ಪೊಲ
ಪೊಲೀಸ್


ವಿಜಯಪುರ, 26 ಮಾರ್ಚ್ (ಹಿ.ಸ.)

ಆ್ಯಂಕರ್ : ಮಹಿಳಾ ಪೊಲೀಸ್ ಠಾಣೆಯ ವತಿಯಿಂದ ಗುರುವಾರ “ತೆರೆದ ಮನೆ” ಕಾರ್ಯಕ್ರಮವನ್ನು ಆಯೋಜಿಸಿ, ಬಿಡಿಇ ಸೊಸೈಟಿಯ ಕಾಲೇಜಿನ ವಿದ್ಯಾರ್ಥಿನಿಯರಿಗೆ ವಿವಿಧ ಕಾನೂನುಗಳ ಕುರಿತು ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿದ್ಯಾರ್ಥಿನಿಯರನ್ನು ಠಾಣೆಗೆ ಆಹ್ವಾನಿಸಿ, ಸಮಾಜದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದ ಪ್ರಮುಖ ಕಾನೂನುಗಳ ಕುರಿತು ಮಾಹಿತಿ ನೀಡಿದರು.

ಈ ವೇಳೆ ಪೋಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಮಕ್ಕಳ ಸಹಾಯವಾಣಿ 1098, ಪೊಲೀಸ್ ಸಹಾಯವಾಣಿ 112, ರಸ್ತೆ ಸುರಕ್ಷತೆ ನಿಯಮಗಳು ಸೇರಿದಂತೆ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು.

ವಿದ್ಯಾರ್ಥಿನಿಯರು ಯಾವುದೇ ಅನ್ಯಾಯ ಅಥವಾ ಸಮಸ್ಯೆ ಎದುರಿಸಿದರೆ ತಕ್ಷಣವೇ ಸಹಾಯವಾಣಿ ಸಂಖ್ಯೆಗಳ ಮೂಲಕ ಪೊಲೀಸರನ್ನು ಸಂಪರ್ಕಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು. ಜೊತೆಗೆ ಸಮಾಜದಲ್ಲಿ ಕಾನೂನು ಅರಿವು ಹೆಚ್ಚಿಸುವುದು ಮತ್ತು ಮಹಿಳೆಯರು-ಮಕ್ಕಳ ಸುರಕ್ಷತೆಗಾಗಿ ಇಂತಹ ಕಾರ್ಯಕ್ರಮಗಳು ಅತ್ಯಂತ ಅಗತ್ಯವೆಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಬಿಡಿಇ ಸೊಸೈಟಿಯ ಕಾಲೇಜಿನ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande