
ಧಾರವಾಡ, 27 ಮಾರ್ಚ್ (ಹಿ.ಸ.):
ಆ್ಯಂಕರ್:
ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ||ಬಾಬು ಜಗಜೀವನ ರಾಂ ಅವರ 119ನೇ ಜನ್ಮ ದಿನಾಚರಣೆಯ ಅಂಗವಾಗಿ ಪರಿಶಿಷ್ಟ ಜಾತಿಯ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಏಪ್ರಿಲ್ 05, 2026 ರಂದು ಸನ್ಮಾನಿಸಲು ನಿರ್ಧರಿಸಲಾಗಿದೆ.
ಪರಿಶಿಷ್ಟ ಜಾತಿಯ ಜನಾಂಗದವರ ಶ್ರೇಯಸ್ಸಿಗಾಗಿ ಶ್ರಮಿಸಿರುವ ವ್ಯಕ್ತಿಗಳು ಅರ್ಜಿ ನಮೂನೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ 30, 2026 ರೊಳಗೆ ತಮಗೆ ಸಂಬಂಧಿಸಿದ ಆಯಾ ತಾಲ್ಲೂಕು ಕಚೇರಿಗಳಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ:0836-2447201 ಹಾಗೂ ಆಯಾ ತಾಲ್ಲೂಕು ಕಚೇರಿಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa