
ವಿಜಯಪುರ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ಬಿ.ಎಲ್.ಡಿ.ಇ ಡೀಮ್ಡ್ ಕಾನೂನು ಮಹಾವಿದ್ಯಾಲಯ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಅಪರಾಧ ಕಾನೂನು, ವಿಶೇಷ ಮಸೂದೆ ಹಾಗೂ ನ್ಯಾಯಶಾಸ್ತ್ರ” ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಶನಿವಾರ ಉದ್ಘಾಟಿಸಲಾಯಿತು.
ಕಾರ್ಯಾಗಾರದ ಉದ್ದೇಶ ಪೊಲೀಸ್ ಅಧಿಕಾರಿಗಳಿಗೆ ಅಪರಾಧ ಕಾನೂನುಗಳು, ವಿಶೇಷ ಕಾಯ್ದೆಗಳು ಹಾಗೂ ನ್ಯಾಯಶಾಸ್ತ್ರ ವಿಜ್ಞಾನದ ಕುರಿತು ಹೆಚ್ಚಿನ ಅರಿವು ಮೂಡಿಸುವುದಾಗಿದೆ. ತನಿಖಾ ಪ್ರಕ್ರಿಯೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಲು ಅಗತ್ಯವಾದ ಮಾರ್ಗದರ್ಶನ ಮತ್ತು ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ತನಿಖಾ ಸಹಾಯಕ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.
ಕಾರ್ಯಾಗಾರದಲ್ಲಿ ಪರಿಣಿತರ ಮೂಲಕ ಅಪರಾಧ ತನಿಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಉಪನ್ಯಾಸ ಮತ್ತು ತರಬೇತಿ ನೀಡಲಾಗುತ್ತದೆ ಎಂದು ತಿಳಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande