ಮಾರ್ಚ್ 30ರಂದು ಅಸ್ಸಾಂ, ಪುದುಚೇರಿ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ನವದೆಹಲಿ, 28 ಮಾರ್ಚ್ (ಹಿ.ಸ.): ಆ್ಯಂಕರ್:ಮುಂಬರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆ ನರೇಂದ್ರ ಮೋದಿ ಅವರು ಮಾರ್ಚ್ 30ರಂದು ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರ್ಯಕರ್ತರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ. ‘ನಮೋ ಆಪ್’ ಮೂಲಕ ನಡೆಯಲಿರುವ “ಮೇರಾ ಬೂತ್ ಸಬ್ಸೆ ಮಜ್
Pm


ನವದೆಹಲಿ, 28 ಮಾರ್ಚ್ (ಹಿ.ಸ.):

ಆ್ಯಂಕರ್:ಮುಂಬರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆ ನರೇಂದ್ರ ಮೋದಿ ಅವರು ಮಾರ್ಚ್ 30ರಂದು ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರ್ಯಕರ್ತರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ.

‘ನಮೋ ಆಪ್’ ಮೂಲಕ ನಡೆಯಲಿರುವ “ಮೇರಾ ಬೂತ್ ಸಬ್ಸೆ ಮಜ್ಬೂತ್” ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದು, ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಬೆಳೆಸಿ ಚುನಾವಣಾ ಸಿದ್ಧತೆಗಳನ್ನು ಬಲಪಡಿಸುವುದು ಮುಖ್ಯ ಉದ್ದೇಶವಾಗಿದೆ.

ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಕಳೆದ ದಶಕದಲ್ಲಿ ಅಸ್ಸಾಂ ರಾಜ್ಯವು ಗಮನಾರ್ಹ ಅಭಿವೃದ್ಧಿ ಸಾಧಿಸಿದೆ ಎಂದು ತಿಳಿಸಿದ್ದಾರೆ. ಮುಂದಿನ ಐದು ವರ್ಷಗಳಿಗೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ಮೇಲೆ ಜನರು ವಿಶ್ವಾಸ ವ್ಯಕ್ತಪಡಿಸುವರು ಎಂಬ ನಂಬಿಕೆಯನ್ನು ಅವರು ವ್ಯಕ್ತಪಡಿಸಿದರು. “ಡಬಲ್ ಎಂಜಿನ್ ಸರ್ಕಾರ”ದ ಮೂಲಕ ರಾಜ್ಯದ ಅಭಿವೃದ್ಧಿ ಮುಂದುವರಿಯಲಿದೆ ಎಂದರು.

ಮಧ್ಯಾಹ್ನ ಅಸ್ಸಾಂ ಬಿಜೆಪಿ ಕಾರ್ಯಕರ್ತರೊಂದಿಗೆ ನಡೆಯುವ ಸಂವಾದದಲ್ಲಿ ಚುನಾವಣಾ ಕಾರ್ಯತಂತ್ರ ಹಾಗೂ ಸಂಘಟನಾ ಚಟುವಟಿಕೆಗಳ ಕುರಿತು ಚರ್ಚಿಸಲಾಗುತ್ತದೆ.

ಇದಕ್ಕೂ ಮುನ್ನ, ಪುದುಚೇರಿ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಕಳೆದ ಐದು ವರ್ಷಗಳಲ್ಲಿ ಎನ್‌ಡಿಎ ಸರ್ಕಾರವು ಕೇಂದ್ರಾಡಳಿತ ಪ್ರದೇಶದ ಜನರ ನಿರೀಕ್ಷೆಗಳನ್ನು ಈಡೇರಿಸಿದೆ ಎಂದು ಹೇಳಿದ್ದಾರೆ. ಪುದುಚೇರಿ ಜನರು ಮತ್ತೆ ಎನ್‌ಡಿಎಗೆ ಬೆಂಬಲ ನೀಡುವರು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಮಾರ್ಚ್ 30ರಂದು ಸಂಜೆ 5:30ಕ್ಕೆ ಪುದುಚೇರಿಯಲ್ಲಿ ನಡೆಯುವ ಸಂವಾದದಲ್ಲಿ ಪ್ರಧಾನಿ ನೇರವಾಗಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿದ್ದು, ಈ ಕಾರ್ಯಕ್ರಮವು ಬಿಜೆಪಿಯ ಸಂಘಟನಾ ಬಲವರ್ಧನೆ ಅಭಿಯಾನದ ಪ್ರಮುಖ ಅಂಗವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande