
ನವದೆಹಲಿ, 28 ಮಾರ್ಚ್ (ಹಿ.ಸ.):
ಆ್ಯಂಕರ್:
ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ 132ನೇ ಸಂಚಿಕೆಯಲ್ಲಿ ಭಾನುವಾರ (ಮಾರ್ಚ್ 29) ಬೆಳಿಗ್ಗೆ 11 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಎಕ್ಸ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ನಾಗರಿಕರು ಕಾರ್ಯಕ್ರಮವನ್ನು ಕಡ್ಡಾಯವಾಗಿ ವೀಕ್ಷಿಸಿ ಅದರ ಭಾಗವಾಗುವಂತೆ ಮನವಿ ಮಾಡಿದ್ದಾರೆ.
ಈ ಕಾರ್ಯಕ್ರಮವು ಎಂದಿನಂತೆ ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನ ಸೇರಿದಂತೆ ವಿವಿಧ ಪ್ರಸಾರ ಜಾಲತಾಣಗಳಲ್ಲಿ ನೇರವಾಗಿ ಪ್ರಸಾರವಾಗಲಿದೆ. ಜೊತೆಗೆ ಆಲ್ ಇಂಡಿಯಾ ರೇಡಿಯೋ ಸುದ್ದಿ ವೆಬ್‌ಸೈಟ್ ಮತ್ತು ‘ನ್ಯೂಸ್ ಆನ್ ಏರ್’ ಮೊಬೈಲ್ ಆಪ್‌ನಲ್ಲಿಯೂ ಲಭ್ಯವಿರುತ್ತದೆ.
ಇದಲ್ಲದೆ, ಆಕಾಶವಾಣಿ ಸುದ್ದಿ, ದೂರದರ್ಶನ ಸುದ್ದಿ, ಪ್ರಧಾನ ಮಂತ್ರಿಗಳ ಕಚೇರಿ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿಯೂ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತದೆ.
‘ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ದೇಶದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಅಭಿವೃದ್ಧಿ ಸಂಬಂಧಿತ ಪ್ರಮುಖ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದರ ಜೊತೆಗೆ ಜನರೊಂದಿಗೆ ನೇರ ಸಂಪರ್ಕ ಸಾಧಿಸುತ್ತಿರುವುದು ವಿಶೇಷವಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa