ಒಡಿಶಾದ ನಯಾಗಢದಲ್ಲಿ ಭೀಕರ ಬಸ್ ಅಪಘಾತ: ಐವರು ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ
ಭುವನೇಶ್ವರ, 28 ಮಾರ್ಚ್ (ಹಿ.ಸ.): ಆ್ಯಂಕರ್: ಒಡಿಶಾ ರಾಜ್ಯದ ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಶ್ಪಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಟಕೇರಾ ಸಮೀಪದ ಹನುಮಾನ್ ಘಾಟಿಯಲ್ಲಿ ಈ
Accident


ಭುವನೇಶ್ವರ, 28 ಮಾರ್ಚ್ (ಹಿ.ಸ.):

ಆ್ಯಂಕರ್:

ಒಡಿಶಾ ರಾಜ್ಯದ ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ದಶ್ಪಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಟಕೇರಾ ಸಮೀಪದ ಹನುಮಾನ್ ಘಾಟಿಯಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟವರಲ್ಲಿ ಬಸ್ ಚಾಲಕ ಹಾಗೂ ನಾಲ್ವರು ಮಹಿಳೆಯರು ಸೇರಿದ್ದಾರೆ.

ಪೊಲೀಸರ ಪ್ರಕಾರ, ಸುಮಾರು 60 ಪ್ರಯಾಣಿಕರನ್ನು ಹೊತ್ತ ಖಾಸಗಿ ಪ್ರವಾಸಿ ಬಸ್ ಬ್ರಹ್ಮಪುರದಿಂದ ಹರಿಶಂಕರ್ ಕಡೆಗೆ ಸಾಗುತ್ತಿದ್ದಾಗ, ತೀಕ್ಷ್ಣ ತಿರುವಿನಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಬಂಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಅನೇಕ ಪ್ರಯಾಣಿಕರು ಬಸ್ಸಿನಿಂದ ಎಸೆಯಲ್ಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಬಸ್ಸಿನ ಕೆಳಗೆ ಸಿಲುಕಿಕೊಂಡಿದ್ದರು. ತಕ್ಷಣವೇ ದಶ್ಪಲ್ಲಾ ಮತ್ತು ಬನಿಗೋಚಾ ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು.

ಗಾಯಾಳುಗಳನ್ನು ಮೊದಲು ದಶಪಲ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಗಂಭೀರವಾಗಿ ಗಾಯಗೊಂಡ ಸುಮಾರು 15 ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು. ಗಾಯಗೊಂಡ ಪ್ರಯಾಣಿಕ ಸುಭ್ರಂಶು ನಾಯಕ್ ಹೇಳುವಂತೆ, ತಿರುವಿನಲ್ಲಿ ಬಸ್ ಅತಿವೇಗವಾಗಿ ಸಾಗಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮುರಿದ ಕಿಟಕಿಗಳ ಮೂಲಕ ಅನೇಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande