
ವಿಜಯಪುರ, 28 ಮಾರ್ಚ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಹಾಗೂ ಅಹವಾಲುಗಳನ್ನು ಶಾಸಕ ಅಶೋಕ ಮನಗೂಳಿ ಸ್ವೀಕರಿಸಿದರು.
ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಜನರು ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಈ ವೇಳೆ ಮುಂದಿಟ್ಟರು. ಸಾರ್ವಜನಿಕರ ಅಹವಾಲುಗಳನ್ನು ಗಮನದಿಂದ ಆಲಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಲಾಯಿತು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಪ್ರಾಮುಖ್ಯವಾಗಿದ್ದು, ಜನರ ಹಿತಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.
ಈ ವೇಳೆ ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande