
ಚಿಕ್ಕೋಡಿ, 29 ಮಾರ್ಚ್ (ಹಿ.ಸ.):
ಆ್ಯಂಕರ್:
ಚಿಕ್ಕೋಡಿ ನಗರದಲ್ಲಿ ನೂತನವಾಗಿ ಸ್ಥಾಪಿಸಲಾದ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಬ್ಯಾಂಕ್ ಅನ್ನು ಇಂದು ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.
ಬ್ಯಾಂಕ್ ಉದ್ಘಾಟನೆಯ ಬಳಿಕ ಮಾತನಾಡಿದ ಅವರು, ಈ ಸಂಸ್ಥೆಯು ಸ್ಥಳೀಯ ಜನತೆಗೆ ಆರ್ಥಿಕ ಸೇವೆಗಳು ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವುದರ ಜೊತೆಗೆ, ಸಣ್ಣ ವ್ಯಾಪಾರಿಗಳು, ರೈತರು ಹಾಗೂ ಸಾಮಾನ್ಯ ಜನರ ಆರ್ಥಿಕ ಬೆಳವಣಿಗೆಗೆ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.
ಈ ಬ್ಯಾಂಕ್ ಮೂಲಕ ಸಾಲ ಸೌಲಭ್ಯ, ಉಳಿತಾಯ ಯೋಜನೆಗಳು ಸೇರಿದಂತೆ ವಿವಿಧ ಆರ್ಥಿಕ ಸೇವೆಗಳು ಜನಸಾಮಾನ್ಯರಿಗೆ ಹತ್ತಿರವಾಗಲಿದ್ದು, ಚಿಕ್ಕೋಡಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಇದು ನೆರವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಗಣ್ಯರು, ಸ್ಥಳೀಯ ಮುಖಂಡರು, ಸಮಾಜದ ಹಿರಿಯರು ಹಾಗೂ ನಾಗರಿಕರು ಉಪಸ್ಥಿತರಿದ್ದು, ಹೊಸ ಬ್ಯಾಂಕ್ ಆರಂಭಕ್ಕೆ ಹರ್ಷ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa